ಬೆಂಗಳೂರು: ವಾಲ್ಮೀಕಿ ನಿಗಮ (ಎಸ್‌ಟಿ) ದ ಹಗರಣ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಅಧಿಕಾರಿಗಳು ನಿಗಮದ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಿದೆ.
ಹಗರಣ ಬೆಳಕಿಗೆ ಬಂದ ಬಳಿಕ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಎಸ್ಕೇಪ್ ಆಗಿದ್ದರು.
ಶುಕ್ರವಾರ ರಾತ್ರಿ ಪದ್ಮನಾಭ್ ಮತ್ತು ಪರಶುರಾಮ್‌ನನ್ನು ಬೆಂಗಳೂರು ಹೊರವಲಯದಲ್ಲಿ ಎಸ್‌ಐಟಿ ಬಂಧಿಸಿದ್ದು, ಇಂದು ಮಧ್ಯಾಹ್ನದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ.
ಬಳಿಕ ಎಸ್‌ಐಟಿ ತನ್ನ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಿದೆ.
Ad