ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಕಾವೇರಿ ನೀರಿಗೆ ಅವಲಂಬಿತರಾಗಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕಾವೇರಿ 5ನೇ ಹಂತ ಯೋಜನೆ ಅನುಷ್ಠಾನ ಸಂಬಂಧ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿದುಬಂದಿದೆ. ಜೂನ್ 6 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತವಾಗಲಿದೆ.
ಕಾವೇರಿ 1,2,3 ಹಂತಗಳ ಘಟಕಗಳು ಕಾಮಗಾರಿ ನಿಮಿತ್ತ ಬಂದ್ ಆಗಲಿದ್ದು, ಈ ಕಾರಣಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕಾವೇರಿ 4ನೇ ಹಂತ 1ನೇ ಮತ್ತು ಎರಡನೇ ಘಟ್ಟಗಳ ಬೆಳಗ್ಗೆ 10 ರಿಂದ ಮಧ್ಯಾಹ್ನ2 ವರೆಗೆ ಬಂದ್ ಆಗಲಿದೆ. ಹೀಗಾಗಿ ಎರಡು ದಿನ ಬೆಂಗಳೂರು ನಗರದಲ್ಲಿ ನೀರು ಪೂರೈಕೆ ಸ್ತಗಿತವಾಗಲಿದೆ. ಜೂನ್ 6 ಹಾಗೂ 7 ರಂದು ನೀರು ಶೇಖರಿಸಿ ಇಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದ್ದಾರೆ.

