Bengaluru 22°C
Ad

ಬೆಂಗಳೂರಿನಲ್ಲಿ 2 ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಿಲಿಕಾನ್​ ಸಿಟಿ ಮಂದಿ ಕಾವೇರಿ ನೀರಿಗೆ ಅವಲಂಬಿತರಾಗಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 

ಬೆಂಗಳೂರು: ಸಿಲಿಕಾನ್​ ಸಿಟಿ ಮಂದಿ ಕಾವೇರಿ ನೀರಿಗೆ ಅವಲಂಬಿತರಾಗಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಾವೇರಿ 5ನೇ ಹಂತ ಯೋಜನೆ ಅನುಷ್ಠಾನ ಸಂಬಂಧ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿದುಬಂದಿದೆ. ಜೂನ್ 6 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತವಾಗಲಿದೆ.

ಕಾವೇರಿ 1,2,3 ಹಂತಗಳ ಘಟಕಗಳು ಕಾಮಗಾರಿ ನಿಮಿತ್ತ ಬಂದ್ ಆಗಲಿದ್ದು, ಈ ಕಾರಣಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಾವೇರಿ 4ನೇ ಹಂತ 1ನೇ ಮತ್ತು ಎರಡನೇ ಘಟ್ಟಗಳ ಬೆಳಗ್ಗೆ 10 ರಿಂದ ಮಧ್ಯಾಹ್ನ2 ವರೆಗೆ ಬಂದ್ ಆಗಲಿದೆ. ಹೀಗಾಗಿ ಎರಡು ದಿನ ಬೆಂಗಳೂರು ನಗರದಲ್ಲಿ ನೀರು ಪೂರೈಕೆ ಸ್ತಗಿತವಾಗಲಿದೆ. ಜೂನ್ 6 ಹಾಗೂ 7 ರಂದು ನೀರು ಶೇಖರಿಸಿ ಇಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದ್ದಾರೆ.

Ad
Ad
Nk Channel Final 21 09 2023
Ad