ಬೆಂಗಳೂರು: ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಇಂದು ನಡೆದಿದೆ.
ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದಿದ್ದು, ಕೃತ್ಯ ಎಸಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ.
ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿದೆ.

