ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ,ತಾಯಿನಾಡು ಪತ್ರಿಕೆ, ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.
ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.