News Karnataka Kannada
Sunday, May 12 2024
ಬೆಂಗಳೂರು

ಬೆಂಗಳೂರು: ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

Veteran singer Shivamogga Subbanna passes away
Photo Credit : Facebook

ಬೆಂಗಳೂರು:  ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ  ಅವರು  ನಿನ್ನೆ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರು  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಗುರುವಾರ ರಾತ್ರಿ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ರಾತ್ರಿ 11 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕನ್ನಡ ಸಂಗೀತ ಕ್ಷೇತ್ರದ ಮುಂಚೂಣಿ ಗಾಯಕರಾಗಿದ್ದ ಸುಬ್ಬಣ್ಣ ಅವರ ಹೆಸರು ಜಿ. ಸುಬ್ರಹ್ಮಣ್ಯಂ. 1938 ರಲ್ಲಿ ಶಿವಮೊಗ್ಗದಲ್ಲಿ ಜನಿಸಿದ ಅವರು ವಿದೇಶಗಳಲ್ಲಿಯೂ ಕನ್ನಡದ ಹಾಡುಗಳನ್ನು ಹಾಡಿ ಮನೆಮಾತಾಗಿದ್ದರು. ಆಕಾಶವಾಣಿ ಗಾಯಕರಾಗಿ ಕಂಠ ನೀಡಿದ ಅವರು  ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಹಿನ್ನೆಲೆ ಗಾಯಕರಾಗಿ ಪಾದಾರ್ಪಣೆ ಮಾಡಿದ್ದರು. ಚಂದ್ರಶೇಖರ ಕಂಬಾರರ ‘ಕಾಡು ಕುದುರೆ’ ಚಿತ್ರದ ಹಾಡಿಗಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗರು ಇವರಾಗಿದ್ದಾರೆ. ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿ ಜನರ ಮನಸ್ಸು ಗೆದ್ದಿದ್ದರು.

ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು