Ad

ಜುಲೈ 12ರಂದು ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ ಸ್ಥಾನಗಳಿಗೆ ಜುಲೈ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಬೆಂಗಳೂರು: ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ ಸ್ಥಾನಗಳಿಗೆ ಜುಲೈ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

Ad
300x250 2

ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದ ತಲಾ ಒಂದೊಂದು ಸ್ಥಾನಗಳಿಗೆ ಜುಲೈ 12ರಂದು ಮತದಾನ ನಡೆಯಲಿದೆ. ಅಂದೇ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್ ಪಕ್ಷದಲ್ಲಿದ್ದ ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅವರ ಅವಧಿ 14 ಜೂನ್ 2028ರ ತನಕ ಇತ್ತು. ಅವರು 25 ಜನವರಿ 2024ರಂದು ಕಾಂಗ್ರೆಸ್ ಪಕ್ಷವನ್ನು ತೊರೆದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರವಾದ ಒಂದು ಸ್ಥಾನ ಭರ್ತಿ ಮಾಡಲು ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದೆ.

ಉಪ ಚುನಾವಣೆಗೆ 25 ಜೂನ್, ಮಂಗಳವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. 2 ಜುಲೈ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಜುಲೈ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜುಲೈ 5 ಕೊನೆಯ ದಿನ. ಜುಲೈ 12, ಶುಕ್ರವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಆರಂಭವಾಗಲಿದೆ. 16 ಜುಲೈ ಒಳಗೆ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ.

ಕರ್ನಾಟಕ ವಿಧಾನಸಭೆಯ ಶಾಸಕರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದು, ವಿಧಾನಸೌಧದಲ್ಲಿ ಮತದಾನ ನಡೆಯಲಿದೆ. ವಿಧಾನ ಪರಿಷತ್ ಉಪ ಚುನಾವಣೆಗೆ ಆಡಳಿತ ಪಕ್ಷ ಕಾಂಗ್ರೆಸ್ ಈಗಾಗಲೇ ಬಸನಗೌಡ ಬಾದರ್ಲಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

 

Ad
Ad
Nk Channel Final 21 09 2023
Ad