ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಿ, ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ನೆನಪಿಸಿದ್ದಾರೆ.
ಸಚಿವರು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೇ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

