News Karnataka Kannada
Thursday, May 02 2024
ಬೆಂಗಳೂರು

ಕಾರಿನ ಮೇಲಿನ ದಾಳಿ ಕುರಿತು ಇಸ್ರೋ ವಿಜ್ಞಾನಿ ಹಂಚಿಕೊಂಡಿರುವ ವಿಡಿಯೋದಲ್ಲೇನಿದೆ ನೋಡಿ

Watch the video shared by an ISRO scientist on the attack on the car.
Photo Credit : Twitter

ಬೆಂಗಳೂರು: ಬೆಂಗಳೂರಿನ ಇಸ್ರೋದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಜ್ಞಾನಿಯೊಬ್ಬರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲೆಸೆದಿರುವ ಪ್ರಕರಣ ಸುದ್ದಿಯಾಗಿತ್ತು.

ಸಂತ್ರಸ್ತ ಇಸ್ರೋ ವಿಜ್ಞಾನಿ ಅಶುತೋಷ್ ಸಿಂಗ್ ಕಾರಿನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಮುಂದುವರಿಸಿದ್ದೇವೆ ಎಂದು ತಿಳಿಸಿದಾರೆ.

ಈ ನಡುವೆ ದಾಳಿಯ ವಿಡಿಯೋವನ್ನು ಅಶುತೋಷ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಸ್ರೋ ಕಚೇರಿಗೆ ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ಹೆಲ್ಮೆಟ್ ಧರಿಸದ ವ್ಯಕ್ತಿಯೊಬ್ಬ ಏಕಾಏಕಿ ತಮ್ಮ ಕಾರಿನ ಮುಂದೆ ಸ್ಕೂಟರ್ ತಿರುಗಿಸಿದ್ದಾರೆ ಎಂದು ವಿವರಿಸಿದ್ದಾರೆ. ಸ್ಕೂಟರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳಲು ಅಶುತೋಷ್‌ ಹಠಾತ್ ಬ್ರೇಕ್ ಹಾಕಿದ್ದು, ಸ್ಕೂಟರ್ ಸವಾರ ತನ್ನ ಕಾರಿನ ಮುಂದೆ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಹೇಳಿದ್ದಾರೆ.

ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಗಳು ಮತ್ತು ಚಿತ್ರಗಳನ್ನು ಹಂಚಿಕೊಂಡ ಅಶುತೋಷ್‌ , ಆಗಸ್ಟ್ 29 ರಂದು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಇತ್ತೀಚೆಗೆ ನಿರ್ಮಿಸಲಾದ ಎಚ್‌ಎಎಲ್ ಅಂಡರ್‌ಪಾಸ್ ಬಳಿ ಘಟನೆ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು