News Karnataka Kannada
Thursday, April 25 2024
ಬೆಂಗಳೂರು

ನೀರಿನ ಸಮಸ್ಯೆ ಬಗ್ಗೆ ಆತಂಕಬೇಡ ಎಂದ ನೀರು ಸರಬರಾಜು ಮಂಡಳಿ ಅಧ್ಯಕ್ಷರು

ಸಿಲಿಕಾನ್‌ ಸಟಿಯಲ್ಲಿ ನೀರಿನ ಕೊರತೆ ಇನ್ನೆಲೆ ನಗರದ ಹಲವು ಭಾಗಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈಗಾಗಲೇ ನೀರಿನ ಕೊರತೆಯಿಂದಾಗಿ ಬೇಸತ್ತ ಜನರಿಗೆ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಸಿಹಿ ಸುದ್ಧಿ ನೀಡಿದ್ದಾರೆ.ಈ ನಡುವೆ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದ್ದಾರೆ.
Photo Credit : News Kannada

ಬೆಂಗಳೂರು:  ಸಿಲಿಕಾನ್‌ ಸಟಿಯಲ್ಲಿ ನೀರಿನ ಕೊರತೆ ಹಿನ್ನೆಲೆ ನಗರದ ಹಲವು ಭಾಗಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈಗಾಗಲೇ ನೀರಿನ ಕೊರತೆಯಿಂದಾಗಿ ಬೇಸತ್ತ ಜನರಿಗೆ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಸಿಹಿ ಸುದ್ಧಿ ನೀಡಿದ್ದಾರೆ.ಈ ನಡುವೆ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದ್ದಾರೆ.

ನಮ್ಮ ಬಳಿ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಹೀಗಾಗಿ ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ರಾಮ್ ಪ್ರಸಾದ್ ಮನವಿ ಮಾಡಿದರು. 1470 ಎಂಎಲ್‌ಡಿ ನೀರು ಪಂಪ್‌ ಮಾಡಲು ಅವಕಾಶವಿದೆ. ನಮ್ಮ ಕೆಪಾಸಿಟಿಗಿಂತ 20 ಟಿಎಂಸಿ ನೀರು ಪಂಪ್ ಮಾಡುತ್ತಿದ್ದೇವೆ ಎಂದರು.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರು ಅವಲಂಬಿಸಿಲ್ಲ. ಬೋರ್‌ವೆಲ್‌ನಲ್ಲಿ ಅಂತರ್ಜಲ ಕುಸಿತದಿಂದ ಕಾವೇರಿ ನೀರು ಅವಲಂಬನೆ ಮಾಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಹೊರವಲಯದಲ್ಲಿ ಸಮಸ್ಯೆ ಆಗುತ್ತಿದೆ. ಅಂತರ್ಜಲ ಹೆಚ್ಚಿಸಲು ಈಗಾಗಲೇ ತಜ್ಞರ ಜೊತೆ ಚರ್ಚಿಸಿದ್ದೇವೆ ಎಂದರು.

ಇತ್ತೀಚೆಗೆ ಕೆಲ ಸುದ್ದಿಗಳು ಹರಿದಾಡುತ್ತಿದೆ. ಅದರಲ್ಲಿ ಕೆಲವು ಸತ್ಯವಾಗಿದ್ದು, ಕೆಲವು ಸುಳ್ಳು ಇರಬಹುದು. ಅದರ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ. 1992 ರಿಂದ ಕಾವೇರಿ ನೀರು ತರಲು 4 ಹಂತದ ಪ್ರಾಜೆಕ್ಟ್ ಮಾಡಿದ್ದೇವೆ. 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದೆ. 1.54 ಟಿಎಂಸಿ ಪ್ರತಿ ತಿಂಗಳು ಅವಶ್ಯಕತೆಯಿದೆ. ಜುಲೈ ತಿಂಗಳವರೆಗೆ 17 ಟಿಎಂಸಿ ಅವಶ್ಯಕತೆ ಇದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು