Bengaluru 28°C
Ad

ವಾಟರ್ ಟ್ಯಾಂಕರ್ ಬೈಕ್‌ಗೆ ಡಿಕ್ಕಿ: ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಮೃತ್ಯು

ವಾಟರ್ ಟ್ಯಾಂಕರ್‌ ಬೈಕ್‌ಗೆ ಡಿಕ್ಕಿ ಹೊಡೆದು ಅಕ್ಕ ತಮ್ಮ-ಬಲಿಯಾಗಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರು: ವಾಟರ್ ಟ್ಯಾಂಕರ್‌ ಬೈಕ್‌ಗೆ ಡಿಕ್ಕಿ ಹೊಡೆದು ಅಕ್ಕ ತಮ್ಮ-ಬಲಿಯಾಗಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ಇಂದು ಬೆಳಗ್ಗೆ ನಡೆದಿದೆ.

ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಮಧುಮಿತ (20), ರಂಜನ್(18) ಮೃತರು.

ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ಹೋಗಿದ್ದ. ಈ ವೇಳೆ ಕಿಲ್ಲರ್ ವಾಟರ್ ಟ್ಯಾಂಕರ್ ಇಬ್ಬರನ್ನೂ ಬಲಿ ಪಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೈಕ್‌ ಮಿರರ್‌ಗೆ ವೇಗವಾಗಿ ಬಂದ ವಾಟರ್ ಟ್ಯಾಂಕರ್ ಡಿಕ್ಕಿಯಾಗುತ್ತಲೇ ಅಕ್ಕ-ತಮ್ಮ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಮೇಲೆ ಟ್ಯಾಂಕರ್ ಹಿಂಬದಿ ಚಕ್ರ‌ ಹರಿದು ದುರಂತ ಸಂಭವಿಸಿದೆ.

ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad