News Karnataka Kannada
Saturday, April 13 2024
Cricket
ಬೆಂಗಳೂರು

ಸುಧಾಕರ್‌ ಹೆಸರಲ್ಲಿ ಮತ ಕೇಳಿದರೆ ಪಕ್ಷಕ್ಕೇ ಮೈನಸ್‌, ಮೋದಿ ಹೆಸರಲ್ಲಿ ಮತ ಕೇಳುತ್ತೇವೆ: ವಿಶ್ವನಾಥ್‌

ಲೋಕಸಭೆ ಚುನಾವಣೆ ತಯಾರಿ ನಡೆಯುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗಳ ನಡುವೆ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, “ಡಾ.ಕೆ.ಸುಧಾಕರ್‌ ಅವರ ಹೆಸರಲ್ಲಿ ಮತ ಕೇಳಿದರೆ ಪಕ್ಷಕ್ಕೇ ಮೈನಸ್‌ ಆಗುತ್ತದೆ. ಹಾಗಾಗಿ, ಮೋದಿ ಹೆಸರಿನಲ್ಲಿ ಮತ ಕೇಳುತ್ತೇವೆ” ಎಂದು ಹೇಳಿದ್ದಾರೆ.
Photo Credit : NewsKarnataka

ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ ನಡೆಯುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗಳ ನಡುವೆ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, “ಡಾ.ಕೆ.ಸುಧಾಕರ್‌ ಅವರ ಹೆಸರಲ್ಲಿ ಮತ ಕೇಳಿದರೆ ಪಕ್ಷಕ್ಕೇ ಮೈನಸ್‌ ಆಗುತ್ತದೆ. ಹಾಗಾಗಿ, ಮೋದಿ ಹೆಸರಿನಲ್ಲಿ ಮತ ಕೇಳುತ್ತೇವೆ” ಎಂದು ಹೇಳಿದ್ದಾರೆ.

ಇಂದು ಯಲಹಂಕದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಟಿಕೆಟ್‌ ಸಿಗದಿದ್ದಾಗ ಅಸಮಾಧಾನ ಇರುವುದು ಸಹಜ. ಟಿಕೆಟ್‌ ಸಿಗದಿದ್ದರೆ ಮನೆಯಲ್ಲಿ ಇರುತ್ತಿದ್ದೆ ಎಂಬುದಾಗಿ ಸುಧಾಕರ್‌ ಅವರು ಹೊಸಕೋಟೆಯಲ್ಲಿ ಹೇಳಿದ್ದಾರೆ. ಆದರೆ, ನಾನು ಆ ರೀತಿ ಎಲ್ಲೂ ಹೇಳಿಲ್ಲ. ನಮಗೆ ಪಕ್ಷದ ಹಿತಾಸಕ್ತಿ ಬಿಟ್ಟರೆ ಸ್ವಾರ್ಥ ಎಂಬುದಿಲ್ಲ ಎಂದು ಹೇಳಿದರು.

ಸುಧಾಕರ್‌ ಅವರನ್ನು ಮನೆಯೊಳಗೆ ಬಿಟ್ಟಿಲ್ಲ ಎಂಬ ಕುರಿತು ವಿಶ್ವನಾಥ್‌ ಮಾತನಾಡಿದರು. “ಯಲಹಂಕದವರನ್ನು ಖಳನಾಯಕರು ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಿದ್ದಾರೆ. ಗೇಟ್‌ ಒಳಗೆ ಬಿಟ್ಟಿಲ್ಲ ಎಂಬುದಾಗಿ ಆರೋಪ ಮಾಡಿದ್ದಾರೆ. ನಮ್ಮ ಮನೆಗೆ ಕಾರ್ಯಕರ್ತರು ಸೇರಿ ಯಾರೇ ಬಂದರೂ ನೀರು ಕೊಟ್ಟು ಉಪಚಾರ ಮಾಡುತ್ತೇವೆ. ಮಾಜಿ ಸಚಿವರನ್ನು ಬೀದಿಯಲ್ಲಿ ನಿಲ್ಲಿಸುವ ನಿಕೃಷ್ಟ ನಾನಲ್ಲ. ಬಿಜೆಪಿ ರಾಜ್ಯಾಧ್ಯಕ್ಷರು ಸೇರಿ ಎಲ್ಲರಿಗೂ ನನ್ನ ಬಗ್ಗೆ ಗೌರವ ಇದೆ. ಹಾಗಾಗಿ ನಾನು ಸ್ಪಷ್ಟೀಕರಣ ನೀಡುತ್ತಿದ್ದೇನೆ” ಎಂದರು.

ಅಲೋಕ್ ಅವರಿಗೆ ಸೀಟ್ ಸಿಕ್ಕಿಲ್ಲ ಬೇಜಾರಾಗಿದ್ದಾರೆ ಅಂತ ಹೇಳುವುದನ್ನ ಬಿಡಬೇಕು. ಡಾ.ಕೆ.ಸುಧಾಕರ್‌ ಅವರಿಗೆ ಟಿಕೆಟ್‌ ಸಿಕ್ಕರುವ ಕಾರಣ ಎಸ್‌.ಆರ್.ವಿಶ್ವನಾಥ್ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸುದ್ದಿಗೋಷ್ಠಿ ಮೂಲಕ ವಿಶ್ವನಾಥ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು