ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಜೈಲಿನಲ್ಲಿರುವ ನಟ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ ಗೃಹ ಇಲಾಖೆಯು, ಹಲವು ಜೈಲು ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಜೈಲಿನ ಒಳಗೆ ದರ್ಶನ್ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಕರ್ತವ್ಯಲೋಪವಾಗಿದೆ. ಈ ವರೆಗೆ 7 ಜನರನ್ನು ಅಮಾನತು ಮಾಡಲಾಗಿದೆ, ಈ ಬಗ್ಗೆ ತನಿಖೆಯನ್ನೂ ಮಾಡಿಸಿ, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಷಾಮೀಲಾಗಿದ್ದರೆ ಅವರನ್ನೂ ಅಮಾನತು ಮಾಡಲಾಗುವುದು ಎಂದು ತಿಳಿಸಿದ್ದಾರೆ.

