News Karnataka Kannada
Thursday, May 02 2024
ಬೆಂಗಳೂರು

ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂದ್ರೆ ಆಗಲ್ಲ: ಸಿಎಂ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

Wearing khaki shorts, you can't be a socialist: Hariprasad on CM
Photo Credit : News Kannada

ಬೆಂಗಳೂರು: ಸಚಿವ ಸ್ಥಾನ ದೊರೆಯದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಬೆಂಗಳೂರಿನ ಅರಮನೆ ಮೈದಾನದಲ್ಲಿ ತಮ್ಮ ಸಮುದಾಯದ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಹರಿಪ್ರಸಾದ್‌ ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದು ಮತ್ತೊಮ್ಮೆ ವ್ಯಂಗ್ಯವಾಗಿ ಅಸಮಾಧಾನ ಹೊರಹಾಕಿದ್ದಾರೆ.

ನಾನು ಮಂತ್ರಿ ಆಗಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲ್ಲಿ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಅಂತ ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಕಾನು ಪುಂಕವಾಗಿ ಹಾಡಿ ಹೊಗಳುವ ನಾವು ಅವರ ಮೊಮ್ಮಗನಿಗೆ ಯಾವ ಅಧಿಕಾರವನ್ನೂ ಕೊಟ್ಟಿಲ್ಲ ಅಂತ ಅವಮಾನ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತನಾಡುತ್ತಾನೆ. ಆದರೆ ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ ನಾನು. ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದು ಪರೋಕ್ಷವಾಗಿ ಸಿಎಂ ವಿರುದ್ಧ ಬಿಕೆ ಹರಿಪ್ರಸಾದ್​ ವಾಗ್ದಾಳಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು