Bengaluru 22°C
Ad

ದೇಶದ ಅತಿ ಕಿರಿಯ ಸಂಸದ ಸಾಗರ್ ಖಂಡ್ರೆ ಬೆನ್ನು ತಟ್ಟಿ ಸಿದ್ದರಾಮಯ್ಯ ಹೇಳಿದ್ದೇನು?

ಕರ್ನಾಟಕದಲ್ಲಿ ಬೀದರ್ ಕ್ಷೇತ್ರದ ಜನರು ಅಚ್ಚರಿಯ ಫಲಿತಾಂಶವನ್ನು ನೀಡಿದ್ದಾರೆ. ಕಾಂಗ್ರೆಸ್​ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಬೀದರ್ ಕ್ಷೇತ್ರದ ಜನರು ಅಚ್ಚರಿಯ ಫಲಿತಾಂಶವನ್ನು ನೀಡಿದ್ದಾರೆ. ಕಾಂಗ್ರೆಸ್​ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.

Ad
300x250 2

ಕಾವೇರಿ ಅಧಿಕೃತ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಸಾಗರ್ ಖಂಡ್ರೆ ಅವರಿಗೆ ಆಶೀರ್ವಾದ ಮಾಡಿದ ಮುಖ್ಯಮಂತ್ರಿಗಳು, ದೇಶದ ಅತಿ ಕಿರಿಯ ಸಂಸದರರು ಹಾಗೂ ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಸಾಗರ್‌ ಖಂಡ್ರೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶೀರ್ವಾದ ಪಡೆದಿದ್ದಾರೆ.

ಈ ವೇಳೆ ಸಾಗರ್‌ ಖಂಡ್ರೆ ಅವರಿಗೆ ರಾಜಕೀಯದ ಕುರಿತು ಸಿದ್ದರಾಮಯ್ಯ ಪಾಠ ಮಾಡಿದ್ದಾರೆ. ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೀದರ್ ನಿಂದ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆಗೆ ಮು ಕಿವಿಮಾತು ಹೇಳಿದ್ದಾರೆ. ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಸಾಗರ್ ಖಂಡ್ರೆ ಅವರ ತಂದೆ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್, ಮಾಜಿ ಶಾಸಕ ಅಶೋಕ್ ಖೇಣಿ, ಚಿಂಚೋಳಿಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಭಾಷ್ ವಿ ರಾಠೋಡ್,

ಕಲ್ಬುರ್ಗಿ ಮಾಜಿ ಮೇಯರ್ ಶರಣು ಮೋದಿ ಮತ್ತಿತರರು ಉಪಸ್ಥಿತರಿದ್ದರು. ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

Ad
Ad
Nk Channel Final 21 09 2023
Ad