News Karnataka Kannada
Friday, May 03 2024
ಬೆಂಗಳೂರು

ಇದ್ಯಾವುದು ಹೊಸ ಧರ್ಮ ? ಸನಾತನ?? ಎಂದು ಪ್ರಶ್ನಿಸಿದ ನಟ ಕಿಶೋರ್‌

What is this new religion? Sanatan?? Actor Kishore asked.
Photo Credit : Facebook

ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಕೋವಿಡ್‌ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ತಲೆ ಕಡಿಯಬೇಕು ಎಂದು ಹೇಳಿಕೆ ನೀಡಿದ್ದ ಆಯೋಧ್ಯೆಯ ಸಂತ ಪರಮಹಂಸ ಆಚಾರ್ಯ ಅವರ ವಿರುದ್ಧ ನಟ ಕಿಶೋರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿರುವ ಅವರು ಇಷ್ಟು ದಿನ ಹಿಂದೂ ಹಿಂದೂ ಎಂದು ಅರಚುತ್ತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟಿರೆನುಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅವರು ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿದ್ದು ಹೀಗಿದೆ. ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ?, ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ? ಸನಾತನ? ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು.

ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು , ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ ..

ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ.

ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ. ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು