ಬೆಂಗಳೂರು : ಕಳೆದ 3 ದಿನಗಳಿಂದ ರಾಜ್ಯದ ಅನೇಕ ಕಡೆ ಅಕಾಲಿಕ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇವತ್ತು ಮತ್ತು ನಾಳೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಕರಾವಳಿ ತೀರದಲ್ಲಿ ಜೋರಾದ ಗಾಳಿಯು ಪ್ರತಿ ಗಂಟೆಗೆ 35ರಿಂದ 45.0 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಪ್ರತಿ ಗಂಟೆಗೆ 55 ಕಿ.ಮೀ ತಲುಪುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ನವೆಂಬರ್ 17 ಇವತ್ತು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆ ಆಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಮತ್ತು ಉತ್ತರ ಕನ್ನಡ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ನವೆಂಬರ್ 18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.