News Karnataka Kannada
Monday, April 29 2024
ಬೆಂಗಳೂರು

ನಾಳೆಯಿಂದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ.
Photo Credit : Pixabay

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕುಡಿಯುವ ನೀರಿಗೂ ತತ್ವಾರವಿದೆ. ಈ ನಡುವೆ ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ ಅಬ್ಬರದಿಂದ ಮತ್ತೊಮ್ಮೆ ಮಳೆ ಹೆಚ್ಚಾಗಿದೆ.

ನಾಳೆಯಿಂದ (ಅ. 29) ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕೆಲವು ರಾಜ್ಯಗಳಲ್ಲಿ ಅ. 21ರಿಂದಲೇ ಹಿಂಗಾರು ಮಳೆಯ ಪ್ರವೇಶವಾಗಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತವೂ ಎದ್ದಿರುವುದರಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ.

ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3.8 / 5. Vote count: 4

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು