ಬೆಂಗಳೂರು: ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನ.29ರಿಂದ ಡಿ.2 ರವರೆಗೆ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.

ನೀರು ಶೇಖರಣೆಯಾಗಿರುವ ತಗ್ಗು ಪ್ರದೇಶ, ಕೆರೆ, ಕಾಲುವೆಗಳಿಗೆ ಮಕ್ಕಳು ಸೇರಿದಂತೆ ಸಾರ್ವಜನಿಕರು ಹೋಗದಂತೆ ಜಾಗ್ರತೆವಹಿಸಬೇಕು. ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಲ್ಲಿರುವ ರೈತರು ದೂರವಿರಬೇಕು. ಮಳೆ ಬೀಳುವ ಸಂದರ್ಭದಲ್ಲಿ ಹೆಚ್ಚು ತಿರುಗಾಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.