ಬೆಂಗಳೂರು: ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು, ಆಯುಧ ಪೂಜೆ ದಿನ ಹೊಸ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
‘ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವಿಡಿಯೊ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು’ ಎಂದಿದ್ದಾರೆ.

