News Karnataka Kannada
Monday, April 29 2024
ಬೆಂಗಳೂರು

‘ಮೀಸಲಾತಿ ಇದ್ದಿದ್ರೆ ವಿಶ್ವಕಪ್‌ ಗೆಲ್ತಿದ್ರು..’ ಎಂದು ಟ್ವೀಟ್‌ ಮಾಡಿದ ಚೇತನ್‌ ಅಹಿಂಸಾ

Chtn
Photo Credit : News Kannada

ಬೆಂಗಳೂರು : ಭಾರತದ ಕ್ರಿಕೆಟ್‌ ಅಭಿಮಾನಿಗಳು ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಆರು ವಿಕೆಟ್‌ ಸೋಲಿನ ನಿರಾಸೆಯಲ್ಲಿದ್ದರೆ, ಈ ನಡುವೆ ತಂಡದ ಸೋಲಿನ ಪರಾಮರ್ಶೆ ಆರಂಭವಾಗಿದೆ. ಇದರ ನಡುವೆ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ಟ್ವಿಟರ್‌ನಲ್ಲಿ ಆಡಿರುವ ಮಾತುಗಳು ಕ್ರಿಕೆಟ್‌ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಂಡ 6 ವಿಕೆಟ್ ಸೋಲು ಕಂಡ ಬೆನ್ನಲ್ಲಿಯೇ ಟ್ವೀಟ್‌ ಮಾಡಿದ ಚೇತನ್‌ ಅಹಿಂಹಾ, “ಭಾರತ ತಂಡದಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಹೇಳಿದ್ದಾರೆ. ‘ ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು..’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪಂದ್ಯದ ನಡೆಯುವ ವೇಳೆಯಲ್ಲಿಯೇ ಇನ್ನೊಂದು ಟ್ವೀಟ್‌ ಮಾಡಿದ್ದ ಚೇತನ್‌ ಅಹಿಂಸಾ, ‘ಭಾರತೀಯ ಕ್ರಿಕೆಟಿಗರು ಇಂದು ಚೆಂಡನ್ನು ಎಸೆಯಬಹುದು/ಹಿಡಿಯಬಹುದು/ಹೊಡೆಯಬಹುದು ಆದರೆ ರಾಷ್ಟ್ರ ನಿರ್ಮಾಣಕ್ಕೆ ಹೆಚ್ಚಿನ ಕೊಡುಗೆ ನೀಡುವುದಿಲ್ಲ. 100+ ವರ್ಷಗಳ ಹಿಂದೆ, ಪಲ್ವಾಂಕರ್ ಬಾಲೂ-ಧಾರವಾಡ ಮೂಲದ ಬೌಲರ್ ಮತ್ತು ಭಾರತದ 1 ನೇ ದಲಿತ ಕ್ರಿಕೆಟಿಗ-ಬಾಬಾಸಾಹೇಬ್ ಅವರ ಕಾರ್ಯಕರ್ತ ಮತ್ತು ಪರಿಚಯಸ್ಥರಾಗಿದ್ದರು.. ಭಾರತಕ್ಕೆ ಸಮಾಜವನ್ನು ಕಾಳಜಿ ವಹಿಸುವ ಕ್ರಿಕೆಟಿಗರು ಅಗತ್ಯವಿದೆ-ಹಣ ಮತ್ತು ವೈಭವವಲ್ಲ’ ಎಂದು ಅವರು ಬರೆದಿದ್ದರು. ಇದು ಕ್ರಿಕೆಟ್‌ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು