Ad

ಪೋಕ್ಸೋ ಪ್ರಕರಣ : ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್‌ಗೆ ರಿಟ್‌ ಅರ್ಜಿ

ಬಿಜೆಪಿ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಫೋಕ್ಸೋ ಕಾಯ್ದೆಯಡಿ ಬಂಧಿಸುವಂತೆ ಕೋರಿ ಹೈಕೋರ್ಟ್‌ಗೆ ಸಂತ್ರಸ್ಥೆಯ ಸಹೋದರ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಫೋಕ್ಸೋ ಕಾಯ್ದೆಯಡಿ ಬಂಧಿಸುವಂತೆ ಕೋರಿ ಹೈಕೋರ್ಟ್‌ಗೆ ಸಂತ್ರಸ್ಥೆಯ ಸಹೋದರ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

Ad
300x250 2

ಘಟನೆ ನಡೆದು ಹಲವು ತಿಂಗಳುಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಜೊತೆಗೆ ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮತ್ತೊಂದೆಡೆ, ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಮಾಡಬೇಕೆಂದು ಕೋರಿ ಯಡಿಯೂರಪ್ಪ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

 

Ad
Ad
Nk Channel Final 21 09 2023
Ad