News Karnataka Kannada
Wednesday, May 08 2024
ಬೆಂಗಳೂರು

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಬಿಎಸ್‌ವೈ ಧ್ವನಿ ಮಾದರಿ ಸಂಗ್ರಹ

Bsy
Photo Credit :

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಯಡಿಯೂರಪ್ಪ ಅವರ ಧ್ವನಿ ಮಾದರಿ ಸಂಗ್ರಹಿಸಿದ್ದಾರೆ.

ಯಡಿಯೂರಪ್ಪ ಅವರ ಮನೆಯಲ್ಲಿ ಫೆ. 2ರಂದು ನಡೆದಿದ್ದ ಕೃತ್ಯದ ಬಗ್ಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಕೃತ್ಯಕ್ಕೆ ಸಂಬಂಧಪಟ್ಟಂತೆ ಕೆಲ ವಿಡಿಯೊ ಹಾಗೂ ಆಡಿಯೊ ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಸೆಕ್ಷನ್ 8 ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿ ಸದಾಶಿವನಗರ ಠಾಣೆಯಲ್ಲಿ ಮಾರ್ಚ್‌ 14ರಂದು ಎಫ್‌ಐಆರ್ ದಾಖಲಾಗಿತ್ತು.

ಸರ್ಕಾರದ ಆದೇಶದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ಸಿಆರ್‌ಪಿಸಿ 164 ಅಡಿ ನ್ಯಾಯಾಧೀಶರ ಎದುರು ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ಧ್ವನಿಮುದ್ರಿಕೆ ಸಂಗ್ರಹಿಸುವುದಕ್ಕಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು. ಅದರಂತೆ ಇಂದು ತನಿಖಾಧಿಕಾರಿಗಳ ಕಛೇರಿಗೆ ತೆರಳಿದ ಬಿಎಸ್‌ ವೈ ಅವರ ಧ್ವನಿ ಮುದ್ರಿಕೆ ದಾಖಲಿಸಿಕೊಂಡ ತನಿಖಾಧಿಕಾರಿ, ನಂತರ ವಾಪಸು ಕಳುಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು