News Karnataka Kannada
Thursday, May 02 2024
ಬೆಂಗಳೂರು

ಯತೀಂದ್ರ ವಿಡಿಯೋ ಆರೋಪ: ದಾಖಲೆ ಬಿಡುಗಡೆ ಮಾಡಿದ ಸಿಎಂ

Yathindra's video allegations: CM releases documents
Photo Credit : News Kannada

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದರು. ಇದೀಗ ಸಿದ್ದರಾಮಯ್ಯ ದಾಖಲೆ ಬಿಡುಗಡೆ ಮಾಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಯತೀಂದ್ರ ಸಿಎಸ್‌ಆರ್ ಫಂಡ್‌ ಬಗ್ಗೆ ಮಾತನಾಡಿದ್ದು ಎಂದ ಸಿಎಂ, ಇದೀಗ ಸಿಎಸ್‌ಆರ್ ಪಂಢ್‌ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಎಂದು  ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್​ಡಿ ಕುಮಾರಸ್ವಾಮಿ  ಅವರು ಮತ್ತೆ ತಮ್ಮ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಿರುವ ಕೊಠಡಿಗಳ ವಿವರದ ಪಟ್ಟಿ. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು