News Karnataka Kannada
Sunday, April 28 2024
ಬೆಂಗಳೂರು

ಯತೀಂದ್ರಗೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಆರ್‌. ಅಶೋಕ್‌

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.
Photo Credit : NewsKarnataka

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದರು.

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ. ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂದರು.

ರಾಜ್ಯದಲ್ಲಿ ಗೂಂಡಾ ಸರ್ಕಾರವಿದ್ದು, ಸಿಎಂ ಸಿದ್ದರಾಮಯ್ಯ ಗೂಂಡಾಗುರುವಾಗಿ ವರ್ತಿಸುತ್ತಿದ್ದಾರೆ. ಕರಸೇವಕರನ್ನು ಬಂಧಿಸಿ, ಹನುಮ ಧ್ವಜ ಇಳಿಸಿ, ಮುಸ್ಲಿಂ ದಂಗೆಕೋರರಿಗೆ ಆಶ್ರಯ ನೀಡಿದ್ದು ಇದೇ ಗೂಂಡಾ ಕಾಂಗ್ರೆಸ್‌. ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹೊಡೆದವರು ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದವರು ಗೂಂಡಾ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಯಾರು ಗೂಂಡಾ ಎಂದು ಪಾಠ ಕಲಿಸಲಿದ್ದಾರೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು