ಬೆಂಗಳೂರು: ರಾಜ್ಯದ ಭಾರೀ ಮಳೆಯಾಗುತ್ತಿದ್ದು 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊ೦ಡ ಪರಿಣಾಮ ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಲಾಗಿದೆ. ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಗುಡುಗು ಮಿಂಚಿನ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

