Bengaluru 27°C
Ad

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದಕ್ಕೆ ಕ್ಷಮೆ ಕೇಳಿದ ಜಮೀರ್

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್‌ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್‌ ಕ್ಷಮೆ ಕೇಳಿದ್ದಾರೆ.

ನಿನ್ನೆ ಹೇಳಿಕೆ ನೀಡುವಾಗ ಒಂದು ಪದ ಬಳಸಿದೆ. ರಾಜಕೀಯ ಮಾಡುತ್ತಾರೆ ಅಂತ ಹೇಳುವ ಬದಲು ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದೆ. ನಾನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಅಂತ ಹೇಳೋಕೆ ಹೋಗಿದ್ದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ತಪ್ಪಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.‌

ಇಂದು ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಜಮೀರ್‌ ಹೇಳಿಕೆಯ ಬಗ್ಗೆ ಜೋರು ಚರ್ಚೆ ನಡೆದಿದೆ. ಹಿರಿಯ ನಾಯಕರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಜಮೀರ್‌ ಕ್ಷಮೆ ಕೇಳುವ ಮೂಲಕ ವಿಚಾರವನ್ನು ತಣ್ಣಗೆ ಮಾಡಲು ಮುಂದಾಗಿದ್ದಾರೆ.

 

Ad
Ad
Nk Channel Final 21 09 2023