Bengaluru 22°C
Ad

ಔರಾದನಲ್ಲಿ 5.49 ಕೋಟಿಯ ಅಭಿವೃದ್ಧಿ ಕೆಲಸಗಳಿಗೆ ಚಾಲನೆ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಜೂ.12ರಂದು ಔರಾದ ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ ಸೇರಿದಂತೆ ನಾನಾ ಕಾಮಗಾರಿಗಳನ್ನು ಪರಿಶೀಲಿಸಿದರು. ಜೊತೆಗೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದರು.

ಔರಾದ(ಬಿ) :ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಜೂ.12ರಂದು ಔರಾದ ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ ಸೇರಿದಂತೆ ನಾನಾ ಕಾಮಗಾರಿಗಳನ್ನು ಪರಿಶೀಲಿಸಿದರು. ಜೊತೆಗೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದರು.

ಪಟ್ಟಣದ ದೇಶಮುಖ ಗಲ್ಲಿ, ಟೀಚರ್ಸ್ ಕಾಲೋನಿ ಸೇರಿದಂತೆ ಹಲವೆಡೆ ಸಂಚರಿಸಿ ಅಂಗನವಾಡಿ ಕಟ್ಟಡ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹೆಚ್ಚುವರಿ ಕೋಣೆಗಳು, ಸೋಲಾರ ಪ್ಯಾನೆಲ್, ಸೋಲಾರ್ ಪ್ಯಾನಲ್, ಆರ್.ಓ ಪ್ಲಾಂಟ್, ಎಪಿಎಂಸಿ ಯಾರ್ಡ್ ಬಳಿ ಸಿಸಿ ರಸ್ತೆ, ಪಾಲಿಟೆಕ್ನಿಕ್ ಕಾಲೇಜು ಕಟ್ಟಡ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಅಭಿವೃದ್ಧಿ ವಿವಿಧ ಕೆಲಸಗಳು, ಪದವಿ ಕಾಲೇಜಿನಲ್ಲಿ ಉನ್ನತೀಕರಣ ಕೆಲಸ, ಶೌಚಾಲಯ, ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಪೀಠೋಪಕರಣ, ಇತರೆ ಉಪಕರಣಗಳ ಅಳವಡಿಕೆ, ಟೀಚರ್ಸ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉನ್ನತೀಕರಣ ಕೆಲಸ ಹಾಗೂ ಆರ್.ಓ ಪ್ಲಾಂಟ್ ಅಳವಡಿಸುವುದು ಒಳಗೊಂಡು ಪಟ್ಟಣದಲ್ಲಿ 5.49 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಔರಾದ(ಬಿ) ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರ ಪ್ರಯತ್ನ ವಹಿಸುತ್ತಿದ್ದು, ಜನತೆಯ ಬೇಡಿಕೆಯ ಅನುಸಾರ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಡೆಯುತ್ತಿರುವ ಎಲ್ಲ ಕೆಲಸಗಳನ್ನು ಕಾಲಮಿತಿಯಲ್ಲಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.

Ad
Ad
Nk Channel Final 21 09 2023
Ad