ಬೀದರ್: ಮಹಾರಾಷ್ಟ್ರ ಬಸ್ ಮತ್ತು ಆಟೋ ಮಧ್ಯೆ ಭೀಕರ ಅಪಘಾತ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಅನಿತಾಬಾಯಿ(45) ಮತ್ತು ಆಕೆಯ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು, ಗಾಯಗೊಂಡವರು ಹೋನ್ನಕೇರಿ ತಾಂಡದ ನಿವಾಸಿಗಳು ಎನ್ನಲಾಗುತ್ತಿದೆ.
ಬಸ್ ಬೀದರ್ನಿಂದ ಮಹಾರಾಷ್ಟ್ರದ ಲಾತೂರ್ಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಜನವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಬಳಿಕ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಬೀದರ್- ಭಾಲ್ಕಿ ಮುಖ್ಯ ರಸ್ತೆ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad