ಬೀದರ್: ಸಿನಿಮೀಯ ರೀತಿಯಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಹಾಗೂ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ 65ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಪಾದಚಾರಿ 40 ವರ್ಷದ ಗುಲ್ಚಂದ್ ಗಾಯಕ್ವಾಡ್ ಹಾಗೂ ಬೈಕ್ ಸವಾರ 21 ವರ್ಷದ ಅಜಯ್ ಎಂದು ಗುರುತಿಸಲಾಗಿದ್ದು, ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
65ನೇ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಗುಲ್ಚಂದ್ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಸಿನಿಮೀಯ ರೀತಿಯಲ್ಲಿ ಅಜಯನ ಬೈಕ್ ವೇಗವಾಗಿ ಎದುರಿಗೆ ಬಂದಿದ್ದು, ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು 500 ಮೀ. ದೂರದವರೆಗೆ ಗುಲ್ಚಂದ್‌ನನ್ನು ರಸ್ತೆಗೆ ಉಜ್ಜಿಕೊಂಡು ಹೋಗಿದೆ. ಉಜ್ಜಿಕೊಂಡು ಹೋಗುತ್ತಾ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಧಗ ಧಗನೆ ಹೊತ್ತಿ ಊರಿದಿದೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad