Bengaluru 25°C
Ad

ಸಂಸದ ಸಾಗರ್ ಖಂಡ್ರೆ ಮನೆ ಮುಂದೆ ಅಂಗನವಾಡಿ ಸಿಬ್ಬಂದಿ‌ಗಳಿಂದ ಪ್ರತಿಭಟನೆ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನೂತನವಾಗಿ ಎಲ್‌ಕೆ‌ಜಿ ಯುಕೆಜಿ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರ ಮನೆ ಮುಂದೆ ಅಂಗನವಾಡಿ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಬೀದರ್: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನೂತನವಾಗಿ ಎಲ್‌ಕೆ‌ಜಿ ಯುಕೆಜಿ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರ ಮನೆ ಮುಂದೆ ಅಂಗನವಾಡಿ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಭಾಲ್ಕಿ ನಗರದಲ್ಲಿರುವ ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರ ಮನೆ ಮುಂದೆ ಬೆಳಿಗ್ಗೆಯಿಂದ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರು ಧರಣಿ ಕುಳಿತರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಕಡೆಗಳಲ್ಲಿ ನೂತನವಾಗಿ ಎಲ್‌ಕೆಜಿ ಯುಕೆಜಿ ಆರಂಭಿಸಲು ರಾಜ್ಯ ಸರ್ಕಾರ ನೀಡಿದ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯ ಸಂಸದರು, ಸಚಿವರು ಹಾಗೂ ಶಾಸಕರ ಮನೆ ಮುಂದೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಮುಂದಾಗಿರುವ ಅಂಗನವಾಡಿ ಸಿಬ್ಬಂದಿಗಳು ನಿರಂತರ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

Ad
Ad
Nk Channel Final 21 09 2023
Ad