Ad

ಬೀದರ್‌ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ನೌಕರರ ಧರಣಿ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌ ಅವರ ಕಚೇರಿ ಎದುರು ನಡೆಸುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿರಿಸಿದೆ.

ಬೀದರ್ : ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌ ಅವರ ಕಚೇರಿ ಎದುರು ನಡೆಸುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿರಿಸಿದೆ.
ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕೆಂದು ಆಗ್ರಹಿಸಿ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತೆಯರು, ಸಹಾಯಕಿಯರು ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ತೀರ್ಮಾನದಿಂದ ಗ್ರಾಮೀಣ ಭಾಗಗಳ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿವೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಬೀದಿಗೆ ಬರಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

Ad
300x250 2

ಸಿಐಟಿಯು ತಾಲ್ಲೂಕು ಅಧ್ಯಕ್ಷೆ ಶಕುಂತಲಾ ನರಸಿಂಗ್‌ ಸೋನಿ, ಶ್ರೀದೇವಿ ಚೂಡೆ, ಉಷಾ ಗುತ್ತೇದಾರ್‌, ಚನ್ನಮ್ಮ ಕೆಂಪೆ, ಸುಮಿತ್ರಾ ಪೂಜಾರಿ, ವಿಜಯಲಕ್ಷ್ಮಿ ಹುಮನಾಬಾದ್‌, ಪ್ರಭು ಸಂತೋಷಕರ್, ಜಗದೇವಿ ಪತ್ರಿ, ಶಾಂತಾ ನಾಗೂರೆ ಮತ್ತಿತರರು ಪಾಲ್ಗೊಂಡಿದ್ದರು.

Ad
Ad
Nk Channel Final 21 09 2023
Ad