Bengaluru 30°C

ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ : ಚಾಲಕ ಮೃತ್ಯು

ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೀದರ್: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ಮೃತ ಲಾರಿ ಚಾಲಕನನ್ನು ಶ್ರೀಪಾದ ನಿರುಗುಡಿ (36) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಇನ್ನೊಂದು ಲಾರಿಯು ವೇಗವಾಗಿ ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.


ಪರಿಣಾಮ ಎರಡು ಲಾರಿಗಳು ನಜ್ಜುಗುಜ್ಜಾಗಿದ್ದು, ನಿಂತಿದ್ದ ಲಾರಿ ಚಾಲಕ ಸಾವನ್ನಪ್ಪಿದ್ದಾನೆ. ಲಾರಿ ಅಪಘಾತದಿಂದ ರಾತ್ರಿ ಕೆಲವೊತ್ತು ಟ್ರಾಫಿಕ್ ಜಾಮ್ ಕೂಡಾ ಆಗಿತ್ತು. ಬಳಿಕ ಜೆಸಿಬಿ ಮೂಲಕ ರಸ್ತೆಯಲ್ಲಿದ್ದ ಎರಡು ಲಾರಿಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023