Ad

ಬೀದರ್: ಡ್ಯಾಮ್ ನೀರಿನಲ್ಲಿ ಈಜಲು ಹೋಗಿ ಬಾಲಕ ಮೃತ್ಯು

ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಖೇರ್ಡಾ (ಬಿ) ಗ್ರಾಮದಲ್ಲಿ ನಡೆದಿದೆ.

ಬಸವಕಲ್ಯಾಣ: ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಖೇರ್ಡಾ (ಬಿ) ಗ್ರಾಮದಲ್ಲಿ ನಡೆದಿದೆ.

Ad
300x250 2

ತಾಲೂಕಿನ ಸಸ್ತಾಪೂರ ಗ್ರಾಮದ ನಿವಾಸಿ ಮುಜಾಮೀಲ್ ಖಾಜಾಮಿಯ್ಯ (15) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಮೂಲತಃ ಸಸ್ತಾಪೂರ ಗ್ರಾಮದವನಾಗಿರುವ ಈತ ಕಳೆದ ಕೆಲ ದಿನಗಳಿಂದ ತನ್ನ ತಾಯಿ ತವರು ಮನೆಯಾಗಿರುವ ತಡೋಳಾ ಗ್ರಾಮದಲ್ಲಿ ನೆಲೆಸಿದ್ದನು.

ಮಂಗಳವಾರ ಸಂಜೆ ತನ್ನ ಐವರು ಗೆಳೆಯರೊಂದಿಗೆ ತಾಲೂಕಿನ ಖೇರ್ಡಾ (ಬಿ) ಗ್ರಾಮದ ಬಳಿಯ ಮುಲ್ಲಾಮಾರಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲೆಂದು ತೆರಳಿದ್ದ. ಆದರೆ ನೀರಿನಾಳದಲ್ಲಿ ಮುಳುಗಿ ಮೇಲೆ ಬಾರಲಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದೊಂದಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಶವ ಹೊರ ತಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುದ್ದಿ ತಿಳಿದ ಪಿಎಸ್‌ಐ ರೇಣುಕಾ ಉಡಗಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad