Bengaluru 24°C
Ad

ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ: 17 ವಿದ್ಯಾರ್ಥಿಗಳ ಮೇಲೆ ಎಫ್ ಐ ಆರ್

ಜಿಎನ್.ಡಿ‌ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಜೈ ಶ್ರೀರಾಮ್ ಹಾಡು ಹಾಕಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಇದಕ್ಕೆ ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಇದರಿಂದ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ.

ಬೀದರ್: ಇಲ್ಲಿನ ಜಿಎನ್.ಡಿ‌ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ವಿದ್ಯಾರ್ಥಿಗಳಿಂದ ಗುಂಪು ಘರ್ಷಣೆ ನಡೆದಿರುವುದಾಗಿ ವರದಿಯಾಗಿದೆ.

ಜಿಎನ್.ಡಿ‌ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಜೈ ಶ್ರೀರಾಮ್ ಹಾಡು ಹಾಕಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಇದಕ್ಕೆ ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಇದರಿಂದ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ.

ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಕೂಡಲೇ ಪೊಲೀಸರು ದೌಡಾಯಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

ಹಲ್ಲೆ ಮಾಡಿ ಪರಾರಿಯಾಗಿದ್ದ ಬಶೀರ್ ಖಾನ್, ಗಫರಾನ್, ಶೇಕ್ ಪಾಷಾ, ಬಿಲಾಲ್ ಸೇರಿದಂತೆ 17 ಕ್ಕೂ ಹೆಚ್ಚು ಅನ್ಯ ಗುಂಪಿನ ಸ್ಟೂಡೆಂಟ್ಸ್ ಮೇಲೆ ಎಫ್ಐಆರ್ ದಾಖಲಾಗಿದೆ. ಹಲ್ಲೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿ ನಟರಾಜ್ ನೀಡಿದ ದೂರಿನ ಮೇಲೆ ಈ ಎಫ್ಐಆರ್ ದಾಖಲಾಗಿದೆ.

ಘಟನೆ ಸಂಬಂಧ ಕಾಲೇಜಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad