ಬೀದರ್ : ಮಹಿಳಾ ಪಿಎಸ್ಐ ಮೇಲೆ ಬೀದರ್ ನ ನ್ಯೂಟೌನ್ ಠಾಣೆ ಕಾನ್ಸ್ಟೇಬಲ್ ಧನರಾಜ್ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷಾ ಹಿನ್ನಲೆ ಬೀದರ್ನ ಮಾದವನಗರದ ಪರೀಕ್ಷಾ ಕೇಂದ್ರದಲ್ಲಿ ಪೊಲೀಸರು ಭದ್ರತಾ ಕರ್ತವ್ಯದಲ್ಲಿದ್ದರು.
ಅದರಂತೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪಿಸಿ ತಡವಾಗಿ ಬಂದಿದ್ದರು. ಇದನ್ನು ಪ್ರಶ್ನಿಸಿದ ಪಿಎಸ್ಐ ಯಲ್ಲಮ್ಮ ಅವರ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪಿಎಸ್ಐ ಗಂಭೀರ ಆರೋಪ ಮಾಡಿದ್ದಾರೆ.
Ad