Bengaluru 27°C
Ad

ʼಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲʼ

ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ. 

ಬೀದರ್‌: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

ಅವರು ಬೀದರ್‌ನಲ್ಲಿ ಇಂದು ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದರು, ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Ad
Ad
Nk Channel Final 21 09 2023
Ad