Ad

ಸರ್ಕಾರದ ವಿರುದ್ದ ಮಾಜಿ ಸಚಿವ ಪ್ರಭು ಚೌಹಾಣ್ ಆಕ್ರೋಶ

ಪಶು ಸಂಗೋಪನಾ ಇಲಾಖೆಯ ಬಹುತೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಮಾಜಿ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.

ಬೀದರ್: ಪಶು ಸಂಗೋಪನಾ ಇಲಾಖೆಯ ಬಹುತೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಮಾಜಿ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.

Ad
300x250 2

ಔರಾದ್‌ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋಶಾಲೆಗೆ ಬಿಜೆಪಿ ಸರಕಾರ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದೆ. ಜೊತೆಗೆ ಪಶು ಸಂಜೀವಿನಿ ಮೂಲಕ ರೈತರಿಗೆ ಅನುಕೂಲವಾಗುವಂತೆ ಆ್ಯಂಬುಲೆನ್ಸ್‌ಗಳನ್ನ ಜಾರಿಗೊಳಿಸಲಾಗಿತ್ತು.

ಆದ್ರೆ ಈಗ ಯಾವ ಆ್ಯಂಬುಲೆನ್ಸ್‌ಗಳು ಸಂಚಾರ ನಡೆಸುತ್ತಿಲ್ಲಾ. ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದು, ಬಿಜೆಪಿಯ ಎಲ್ಲಾ ಯೋಜನೆಗಳನ್ನ ಬಂದ್ ಮಾಡುತ್ತಿದೆ. ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.

ಇನ್ನು ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರವನ್ನ 34 ಎಕರೆ ಪ್ರದೇಶದಲ್ಲಿ ಸ್ಥಾಪಿಸಲು ನಿರ್ಧಿರಿಸಿದ್ದು, ಸ್ವಾಗತಾರ್ಹ ಈ ಯೋಜನೆಗೆ ಹಿಂದೆಯೇ ಅನುಮೋದನೆ ಸಿಕ್ಕಿತ್ತು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಂಕು ಸ್ಥಾಪನೆ ಆಗುತ್ತಿದೆ.

ಇದರ ಮೂಲಕ ಈ ಭಾಗದ ಜನರಿಗೆ ಬಹಳಷ್ಟು ಸಹಕಾರಿ ಆಗಲಿದ್ದು, ಕುರಿ-ಮೇಕೆ, ದೇವಣಿ ತಳಿ, ಖಂಧಾರಿ ತಳಿ, ಎಮ್ಮೆ, ಕೋಳಿ ಸಂವರ್ಧನಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಜೊತೆಗೆ ರೈತರಿಗೂ ತರಬೇತಿ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಹೇಳಿದ್ದರು.

Ad
Ad
Nk Channel Final 21 09 2023
Ad