Bengaluru 23°C
Ad

2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಪೊಲೀಸರ ವಶಕ್ಕೆ

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೀದರ್: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮೀನಿನಲ್ಲಿ 6 ಅಡಿಯ 700ಕ್ಕೂ ಅಧಿಕ ಗಿಡಗಳನ್ನು ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಬಸಂತ್ ಎಂಬಾತ ಗಾಂಜಾ ಬೆಳೆದಿದ್ದ ಎಂದು ತಿಳಿದು ಬಂದಿದೆ. ಆತ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗಾಂಜಾ ಗಿಡಗಳನ್ನು ಎಸ್ಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಾಶ ಮಾಡಲಾಗಿದೆ. ಈ ಸಂಬಂಧ ಮಂಠಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023