Bengaluru 27°C
Ad

ಸಾಗರ್ ಖಂಡ್ರೆಗೆ ಅಭೂತ ಪೂರ್ವ ಗೆಲುವು : ಕಲ್ಯಾಣ ಕರ್ನಾಟಕ ಜನತೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ,ಕಲ್ಯಾಣ ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಿಂದ ಜಯ ಸಾಧಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.

ಬೀದರ್ : ಕಲ್ಯಾಣ ಕರ್ನಾಟಕದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ,ಕಲ್ಯಾಣ ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಿಂದ ಜಯ ಸಾಧಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ನೀಡಿದ ಎಲ್ಲಾ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಗರ್ ಖಂಡ್ರೆ ಅವರನ್ನು 18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸತ್ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗುವಂತೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದ ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad