Bengaluru 27°C
Ad

ಮತ ಎಣಿಕೆ ಶಾಂತಿಯುತವಾಗಿ ನಡೆಸೋಣ: ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ

ಜೂನ್ ೪ ರಂದು ನಡೆಯುವ ಬೀದರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸೋಣ ಮತದಾನ ಈಗಾಗಲೇ ಶಾಂತಿಯುತವಾಗಿ ನಡೆದಿದ್ದು

ಬೀದರ್ : ಜೂನ್ 4 ರಂದು ನಡೆಯುವ ಬೀದರ್ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸೋಣ ಮತದಾನ ಈಗಾಗಲೇ ಶಾಂತಿಯುತವಾಗಿ ನಡೆದಿದ್ದು, ಅದರಂತೆ ಮತ ಎಣಿಕೆ ನಡೆಯಲು ಎಲ್ಲರೂ ಸಹಕಾರ ನೀಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ಕುರಿತು ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಚುನಾವಣಾ ಎಜೆಂಟರಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಬೀದರ್ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೀದರ ನಗರದ ಬಿ.ವ್ಹಿ.ಬಿ ಕಾಲೇಜು ಹಾಗೂ ಬಸವೇಶ್ವರ ಬಿ.ಎಡ್ ಕಾಲೇಜಿನಲ್ಲಿ ಜೂನ್ 4 ರಂದು ನಡೆಯಲಿದ್ದು, ಅಂದು ಬೆಳಿಗ್ಗೆ ೮ ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಗಳಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಚುನಾವಣಾ ಅಭ್ಯರ್ಥಿಗಳು ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 14 ಎಜೆಂಟರುಗಳನ್ನು 14 ಟೇಬಲ್‌ಗಳಿಗೆ ಹಾಗೂ ೧ ಕಾಯ್ದಿರಿಸಿದ ಎಜೆಂಟರನ್ನು ನೇಮಕ ಮಾಡಬೇಕೆಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಾಲಿ ಮಂತ್ರಿಗಳು, ಹಾಲಿ ಶಾಸಕರು ಅಥವಾ ಸಂಸದರು, ನಗರಸಭೆ, ಪುರಸಭೆ ಹಾಲಿ ಅಧ್ಯಕ್ಷರು, ಸರ್ಕಾರದಿಂದ ಗೌರವ ಧನ ಪಡೆಯುತ್ತಿರುವ ಅನುದಾನಿತ ಅಥವಾ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ನಿಗಮ ಮಂಡಳಿಗಳು ಅಥವಾ ಇಲಾಖೆಯ ಮುಖ್ಯಸ್ಥರು ಹಾಗೂ ಅಧ್ಯಕ್ಷರಿಗೆ ಮತ ಎಣಿಕೆ ಎಜೆಂಟರನ್ನಾಗಿ ನೇಮಕ ಮಾಡಬಾರದು ಎಂದು ಹೇಳಿದರು.

ಜೂನ್ ೪ ರಂದು ಬೆಳಿಗ್ಗೆ ೮ ಗಂಟೆಗೆ ಮೊದಲು ಪೋಸ್ಟಲ್ ಬ್ಯಾಲೆಟಗಳ ಮತ ಎಣಿಕೆ ಪ್ರಾರಂಭವಾಗುತ್ತದೆ ನಂತರ ೮:೦೫ ಕ್ಕೆ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಪೋನಗಳನ್ನು ನಿಷೇಧಿಸಲಾಗಿರುತ್ತದೆ. ಚುನಾವಣಾ ಅಭ್ಯರ್ಥಿಗಳು ಹಾಗೂ ಎಜೆಂಟರು ತಮ್ಮೊಂದಿಗೆ ಸಾಮಾನ್ಯ ಕ್ಯಾಲ್ಕುಲೇಟರ್ ಮಾತ್ರ ಮತ ಎಣಿಕೆ ಕೇಂದ್ರದಲ್ಲಿ ತರಲು ಅವಕಾಶ ಇದೇ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಬರುವಾಗ ತಮಗೆ ನೀಡಿದ ಐಡಿ ಕಾರ್ಡಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಬರಬೇಕೆಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ ಭಾರತ ಚುನಾವಣಾ ಆಯೋಗದ ನಿರ್ದೆಶನದಂತೆ ಮತ ಎಣಿಕೆ ಕೇಂದ್ರಗಳಲ್ಲಿ ಹಾನಿಕಾರಕ ಸೇವನೆಗಳಾದ ವಿವಿಧ ರೀತಿಯ ತಂಬಾಕು, ಗುಟಕಾ, ಬೀಡಿ ಸಿಗರೇಟ್, ಬೆಂಕಿ ಪೊಟ್ಟಣ ಹಾಗೂ ವಿದ್ಯುನ್ಮಾನ ಯಂತ್ರಗಳಾದ ಸ್ಮಾರ್ಟ್ ವಾಚ್, ಚೂರಿ ಸೇರಿದಂತೆ ಇತರೆ ವಸ್ತುಗಳು ತರುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಚುನಾವಣಾ ತಹಶಿಲ್ದಾರ ಅಣ್ಣಾರಾವ್ ಪಾಟೀಲ, ವಾರ್ತಾಧಿಕಾರಿ ಜಿ. ಸುರೇಶ, ಬೀದರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಚುನಾವಣಾ ಎಜೆಂಟರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad