Bengaluru 29°C
Ad

ಕೊಟ್ಟ ಸಾಲವನ್ನು ವಾಪಾಸ್ ಕೇಳಿದಕ್ಕೆ ಬಾಲ್ಯ ಸ್ನೇಹಿತನ್ನೇ ಬರ್ಬರವಾಗಿ ಕೊಲೆಗೈದ ಪಾಪಿ!

ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.

ಬೀದರ್ : ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಮೊಹಮ್ಮದ್ ಸಿರಾಜ್ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ನ ಬಾಲ್ಯ ಸ್ನೇಹಿತ ಯಾಸಿನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಆರೋಪಿಯಾಗಿರುವ ಯಾಸಿನ್ ನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad