Ad

ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸೋಣ: ನ್ಯಾಯಧೀಶ ಪ್ರಭು ಎನ್.ಬಡಿಗೇರ

ಬಾಲ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986ರ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಹಾಗು 18 ವರ್ಷದೊಳಗಿನ ಕೀಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಡಿ.ಎಲ್.ಎಸ್.ಎ. ಬೀದರ ಸದಸ್ಯ ಕಾರ್ಯದರ್ಶಿಗಳಾದ ಪ್ರಭು ಎನ್.ಬಡಿಗೇರ್ ಹೇಳಿದರು.

ಬೀದರ್: ಬಾಲ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986ರ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಹಾಗು 18 ವರ್ಷದೊಳಗಿನ ಕೀಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಡಿ.ಎಲ್.ಎಸ್.ಎ. ಬೀದರ ಸದಸ್ಯ ಕಾರ್ಯದರ್ಶಿಗಳಾದ ಪ್ರಭು ಎನ್.ಬಡಿಗೇರ್ ಹೇಳಿದರು.

Ad
300x250 2

ಅವರು ಬುಧವಾರ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡತನದಲ್ಲಿರುವ ಕೆಲವೊಂದು ಪಾಲಕರು 14 ವರ್ಷದೊಳಗಿನ ತಮ್ಮ ಮಕ್ಕಳನ್ನು ವಿವಿಧ ಕಾಮಗಾರಿಗಳಲ್ಲಿ ಕೆಲಸಕ್ಕೆ ದೂಡಿ ಶಿಕ್ಷಣ ವಂಚಿತರನ್ನಾಗಿ ಮಾಡಿ ಸಣ್ಣ ವಯಸ್ಸಿನಲ್ಲಿಯೇ ದುಡಿಮೆಗೆ ಕಳುಹಿಸುತ್ತಿರುವುದು ಖಂಡನಿಯವಾದದ್ದು, ಅಂತಹ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವ ಕಾರ್ಯ ನಾವೆಲ್ಲರು ಸೇರಿ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ದೇಶದ ಚುಕ್ಕಾಣಿ ಹಿಡಿಯುವಂತ ಮಕ್ಕಳು ಇಂದು ದುಷ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕೆ ನಾವೆಲ್ಲರು ಸೇರಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿದುವ  ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ವಿವಿಧ ಶಾಲಾ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಬಾಲಕಾರ್ಮಿಕ ಯೋಜನೆ ಬೀದರನ ಶ್ರೀ ಹರಿ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುಂಚೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ರಂಗಮಂದಿರವರೆಗೆ ವಿವಿಧ ಶಾಲಾ ಮಕ್ಕಳಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವಶರಣಪ್ಪಾ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶ್ರೀ ಗುರುರಾಜ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಜೀಯಾ ಬಳಬಟ್ಟಿ, ಮಕ್ಕಳ ಕಲ್ಯಾಣ ಸಮಿತಿಯ ಮಂಜುಳಾ, ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಅರ್ಜುನ ಎಸ್., ಕಾರ್ಮಿಕ ನಿರೀಕ್ಷಕರಾದ ಕೆ.ಸುವರ್ಣಾ, ತಾ.ದೈಹಿಕ ಶಿಕ್ಷಕರ ಸಂಘದ ಎ.ಕೆ.ಜೋಶಿ, ಸಿಡಿಪಿಓ ಶಾರದಾ ಹಾಗೂ ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad