Ad

ಬೀದರ್: ಡಾ.ಅಂಬೇಡ್ಕರ್ ಭವನದಲ್ಲಿ 500 ಜೋಡಿಗಳ ಸಾಮೂಹಿಕ ವಿವಾಹ

ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಗ್ರಾಮದಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 500 ಜೋಡಿಗಳ ಸರಳ ಸಾಮೂಹಿಕ ವಿವಾಹ ನಡೆಯಿತು.

ಬೀದರ್: ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಗ್ರಾಮದಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 500 ಜೋಡಿಗಳ ಸರಳ ಸಾಮೂಹಿಕ ವಿವಾಹ ನಡೆಯಿತು.

Ad
300x250 2

ಆಣದೂರಿನ ವೈಶಾಲಿನಗರದ ಭಂತೆ ಧಮ್ಮಾನಂದ ಮದುವೆ ವಿಧಿ- ವಿಧಾನಗಳನ್ನು ನಡೆಸಿಕೊಟ್ಟರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳಿಗೆ ಶುಭ ಹಾರೈಸಿದ ಪೌರಾಡಳಿತ ಸಚಿವ ರಹೀಂಖಾನ್ ಅವರು, ಸುಖ, ದುಃಖ ಏನೇ ಎದುರಾದರೂ ಹೊಂದಾಣಿಕೆಯಿಂದ ಬದುಕು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಚಾರ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಶ್ರೀಪತರಾವ್ ದೀನೆ ಮಾತನಾಡಿದರು. ಮುಖಂಡ ಅವಿನಾಶ ದೀನೆ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧು ಎಚ್.ಎಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವು ಮಾನಪ್ಪ, ಅನಿಲ್ ಗಂಜಕರ್, ವೈಜಿನಾಥ ಕಾಂಬಳೆ, ಖಲೀಲ್‍ಮಿಯಾ ಮೊದಲಾದವರು ಇದ್ದರು.

Ad
Ad
Nk Channel Final 21 09 2023
Ad