Bengaluru 28°C
Ad

ಮೋದಿ ಪ್ರಮಾಣ ವಚನ ಹಿನ್ನಲೆ: ವಿಜಯೋತ್ಸವ ಆಚರಿಸಿದ ಬಿಜೆಪಿ ಕಾರ್ಯಕರ್ತರು

ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭಾನುವಾರ ರಾತ್ರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಬೀದರ್: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭಾನುವಾರ ರಾತ್ರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಮೋದಿ ಪ್ರಮಾಣ ಸ್ವೀಕರಿಸುತ್ತಿದ್ದಂತೆ ಜಯಘೋಷ ಹಾಕಿದರು.

ಮೋದಿಗೆ ಜಯವಾಗಲಿ, ಬಿಜೆಪಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿದರು. ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಪ್ರಮುಖರಾದ ಗುರುನಾಥ ಜ್ಯಾಂತಿಕರ್‌, ವೀರೇಶ ಸ್ವಾಮಿ, ಸುಭಾಷ ಮಡಿವಾಳ, ನಿತಿನ್ ನವಲ್ಕೆಲೆ, ರಾಜಕುಮಾರ ನೆಮತಾಬಾದ, ಸಂದೀಪ ಪಾಟೀಲ, ರೋಷನ್ ವರ್ಮಾ, ಗಣೇಶ ಭೋಸಲೆ, ಸಂಗಮೇಶ ಹುಮನಾಬಾದೆ, ಬಸವ ಮೂಲಗೆ, ವಿಜಯಕುಮಾರ ಪಾಟೀಲ, ಶಕುಂತಲಾ ಬೆಲ್ದಾಳೆ, ನಂದಕಿಶೋರ ವರ್ಮಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹುಲಸೂರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಸಂಭ್ರಮಿಸಿದರು.

Ad
Ad
Nk Channel Final 21 09 2023
Ad