Bengaluru 22°C
Ad

ಬೀದರ್‌ ನಲ್ಲಿ ಮುಂಗಾರು ಸಂಭ್ರಮ: ಚುರುಕು ಪಡೆದ ಬಿತ್ತನೆ

Bidar

ಬೀದರ್: ಜಿಲ್ಲೆಯಾದ್ಯಂತ ಮುಂಗಾರು ಮಳೆ ವ್ಯಾಪಿಸಿಕೊಂಡಿರುವುದರಿಂದ ರೈತರು ಸಂಭ್ರಮದಲ್ಲಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಈ ವರ್ಷ ಸಕಾಲಕ್ಕೆ ಜಿಲ್ಲೆಗೆ ಮುಂಗಾರು ಆಗಮನವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ವರ್ಷಧಾರೆ ಆಗುತ್ತಿರುವುದರಿಂದ ಸಹಜವಾಗಿಯೇ ರೈತರ ಖುಷಿಗೆ ಕಾರಣವಾಗಿದೆ.

ಹೆಚ್ಚಿನ ಭಾಗಗಳಲ್ಲಿ ನೆಲ ಹಸಿಯಾಗಿರುವುದರಿಂದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹೊಲಗಳಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ದೃಶ್ಯ ಸಾಮಾನ್ಯವಾಗಿದೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಬೀಜ, ರಸಗೊಬ್ಬರ ಸಮರ್ಪಕವಾಗಿ ವಿತರಿಸಲಾಗುತ್ತಿದೆ. ರೈತರಿಗೆ ಹೆಚ್ಚಿನ ತೊಂದರೆ ಆಗುತ್ತಿಲ್ಲ. ಪ್ರತಿವರ್ಷ ಮುಂಗಾರು ಆಗಮನದ ನಂತರ ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗುತ್ತದೆ. ಅದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡರೆ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ’ ಎಂದು ನಾಗನಕೇರ ಗ್ರಾಮದ ರೈತರು ಸಂಗಪ್ಪ ಪಾರ್ವತಿ ತಿಳಿಸಿದರು.

Ad
Ad
Nk Channel Final 21 09 2023
Ad