Bengaluru 22°C
Ad

ಸರ್ಕಾರಿ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಕುಸಿತ

ಹೋಬಳಿಯ ಹಾಲಹಳ್ಳಿ (ಕೆ) ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವರ್ಷದಿಂದ ವರ್ಷಕ್ಕೆ ಕಲಾ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕುಸಿಯುತ್ತಲೇ ಸಾಗಿದೆ.

ಬೀದರ್ : ಹೋಬಳಿಯ ಹಾಲಹಳ್ಳಿ (ಕೆ) ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವರ್ಷದಿಂದ ವರ್ಷಕ್ಕೆ ಕಲಾ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕುಸಿಯುತ್ತಲೇ ಸಾಗಿದೆ.

Ad
300x250 2

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರ 2007-08 ರಲ್ಲಿ ಇಲ್ಲಿ ಪದವಿಪೂರ್ವ ಕಾಲೇಜು ಆರಂಭಿಸಿದೆ. ಆದರೆ ಖಾಸಗಿ ಕಾಲೇಜುಗಳ ಹಾವಳಿ ಹಾಗೂ ಕಲಾ ವಿಭಾಗದ ಬಗ್ಗೆ ವಿದ್ಯಾರ್ಥಿಗಳಿಗೆ ಇರುವ ನಿರಾಸಕ್ತಿಯಿಂದ ದಾಖಲಾತಿಯಲ್ಲಿ ಇಳಿಕೆಯಾಗುತ್ತಿದೆ ಎನ್ನಲಾಗುತ್ತಿದೆ.

ಪ್ರಸ್ತುತ ದಿನಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಕಲಾ ವಿಭಾಗ ಆಯ್ಕೆ ಮಾಡಲು ಮುಂದೆ ಬರುತ್ತಿಲ್ಲ. ದಾಖಲಾತಿ ಪಡೆದರೂ ಕಾಲೇಜಿಗೆ ಬರುವುದಿಲ್ಲ. ಅಲ್ಲದೇ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗಲು ಬಸ್ ವ್ಯವಸ್ಥೆ ಇರುವುದರಿಂದ ಗ್ರಾಮದ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳು ಈ ಕಾಲೇಜಿಗೆ ಪ್ರವೇಶ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

‘ಪ್ರಸ್ತುತ ದಿನಗಳಲ್ಲಿ ವಿಜ್ಞಾನ ವಿಭಾಗಕ್ಕೆ ಉತ್ತಮ ಭವಿಷ್ಯವಿದೆ ಎಂಬ ಪಾಲಕರ ಮನಸ್ಥಿತಿಯಿಂದ ವಿದ್ಯಾರ್ಥಿಗಳು ಕಲಾ ವಿಭಾಗ ಆಯ್ಕೆ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ಪಾಟೀಲ ಹೇಳುತ್ತಾರೆ.

ಸದ್ಯ ಗ್ರಾಮದಲ್ಲಿ ಸುಸಜ್ಜಿತ ಕಟ್ಟಡ, ಎಲ್ಲ ವಿಷಯ ಬೋಧಿಸುವ ಉಪನ್ಯಾಸಕರಿದ್ದಾರೆ. ಹೀಗಾಗಿ ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳು ಬರಲು ಬಸ್ ವ್ಯವಸ್ಥೆ ಕಲ್ಪಿಸಬೇಕು. ಸದ್ಯ ಬೀದರ್ ನಿಂದ ಸಂಗೋಳಗಿವರೆಗೆ ಬರುವ ಬಸ್ ಹಾಲಹಳ್ಳಿವರೆಗೆ ಬಂದು ಮರಳಿ ಹೋಗಬೇಕು. ಅಂದಾಗ ಮಾತ್ರ ದಾಖಲಾತಿ ಹೆಚ್ಚಳವಾಗುತ್ತದೆ’ ಎಂದು ಗ್ರಾಮದ ಹಿರಿಯರಾದ ರವಿ ಗಂಗಶೆಟ್ಟಿ ತಿಳಿಸುತ್ತಾರೆ.

ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ತೀವ್ರ ಕುಸಿತ ಕಾಣುತ್ತಿದೆ. ದುಬಲಗುಂಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಜಿಲ್ಲೆಯ ಹತ್ತಾರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿ, ಕಾಲೇಜುಗಳನ್ನೇ ಮುಚ್ಚಬೇಕಾದ ಸ್ಥಿತಿ ಬಂದೊದಗಿದೆ’ ಎಬಿವಿಪಿಯ ರೇವಣಸಿದ್ಧ ಜಾಡರ್ ಕಳವಳ ವ್ಯಕ್ತಪಡಿಸುತ್ತಾರೆ.

Ad
Ad
Nk Channel Final 21 09 2023
Ad