Bengaluru 24°C
Ad

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ : ಶ್ರೀ ಹರಿ ದೇಶಪಾಂಡೆ

ಜೂನ್  12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀ ಹರಿ ದೇಶಪಾಂಡೆ ಹೇಳಿದರು.

ಬೀದರ್ :‌ ಜೂನ್  12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀ ಹರಿ ದೇಶಪಾಂಡೆ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಟಾಸ್ಕ ಪೋರ್ಸ ಸಮಿತಿ ಕಾರ್ಯಕಾರಿ ಹಾಗೂ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವು ಜೂನ್. 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ಬೆಳಿಗ್ಗೆ 8:30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರವರೆಗೆ ವಿವಿಧ ಶಾಲಾ- ಕಾಲೇಜುಗಳ ಮಕ್ಕಳಿಂದ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ.

ಇದಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶರು ಚಾಲನೆ ನೀಡುವರು. ಇದರಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು ಎಂದು ಹೇಳಿದರು.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನದಂದು ಬೀದರ ಜಿಲ್ಲೆಯಾದ್ಯಂತ ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದ ಎಲ್ಲಾ ಸರ್ಕಾರಿ ಕಛೇರಿಗಳು, ವಿವಿಧ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ವಿಶ್ವ ಬಾಲಕಾರ್ಮಿಕ ಪದ್ದತಿ ದಿನದ ಪ್ರಮಾಣ ವಚನ ಸ್ವೀಕಾರ ಮಾಡಬೇಕೆಂದರು. ಶಿಕ್ಷಣ ಇಲಾಖೆಯಿಂದ ಅಂದಾಜು 500 ಮಕ್ಕಳಿಗೆ ಕಾರ್ಯಕ್ರಮಕ್ಕೆ ಕರೆ ತರಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.

ಈಗಾಗಲೇ ಜಿಲ್ಲೆಯಲ್ಲಿ ಜೂನ್ 1 ರಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು. ಇದು ಜೂನ್. 30 ರವರಗೆ ನಡೆಯಲಿದೆ ಇದರ ಪ್ರಯುಕ್ತ ವಾರಕ್ಕೆ ಒಂದು ಹಠಾತ್ ದಾಳಿ ಹಾಗೂ ಎಲ್ಲಾ ತಾಲೂಕುಗಳಲ್ಲಿ 1 ದಿವಸದಂತೆ ಆಟೋ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್ ಮಾತನಾಡಿ, ಈ ಕಾರ್ಯಕ್ರಮಕ್ಕೆ ನಮ್ಮ ಇಲಾಖೆಯಿಂದ ಸಹಕಾರ ನೀಡುವದರ ಜೊತೆಗೆ ಕನಿಷ್ಠ ನೂರು ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು ಇದರಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

ಈ ಸಭೆಯಲ್ಲಿ ಬೀದರ ನಗರಸಭೆ ಆಯುಕ್ತರಾದ ಶಿವಪ್ಪ ಅಂಬಿಗೇರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನಾಶ, ಶಿಕ್ಷಣ ಇಲಾಖೆಯ ಅಧಿಕಾರಿ ಗುಂಡಪ್ಪ ಹುಡಗಿ, ಜಿಲ್ಲಾ ಕಾರ್ಮಿಕ ಯೋಜನಾ ನಿರ್ದೆಶಕರಾದ ಅರ್ಜುನ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad