ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. PML ಕಾಯಿದೆಯ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸ್ ಅನ್ನು ರದ್ದು ಮಾಡಲಾಗಿದೆ.
2018ರಲ್ಲಿ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಅಪರಾಧಗಳು ಆದಾಯ ತೆರಿಗೆ ಕಾಯಿದೆಯ ವೇಳಾಪಟ್ಟಿಯ ಭಾಗವಾಗಿರದ ಕಾರಣ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪಿತೂರಿ ಆರೋಪ ಹೊರಿಸಿತ್ತು. ಪಿಎಂಎಲ್ ಕಾಯಿದೆಯ ಅಡಿ ಪ್ರಕರಣ ದಾಖಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸೂರ್ಯಕಾಂತ್ ನೇತೃತ್ವದ ಪೀಠ, ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. PML ಕಾಯಿದೆಯ ಅಡಿಯ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.