Ad

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಜೆಡಿಎಸ್ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನಡೆಸಿದರು.

ನಂಜನಗೂಡು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನಡೆಸಿದರು.ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಹಿಸಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಎತ್ತಿನಗಾಡಿ ಏರಿ, ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Ad
300x250 2

ಬಳಿಕ ಮಾಜಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿ, ರಾಜ್ಯ ಸರ್ಕಾರ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ಪರಿಣಾಮ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುಗ್ಗಿದೆ. 53 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ. ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಲಾಗಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನಿಲ್ಲಿಸಲಾಗಿದೆ. ಇದು ದಲಿತ ವಿರೋಧಿ ಸರ್ಕಾರವಾಗಿದೆ. ಎಸ್ಸಿ,ಎಸ್‌ಟಿ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಹೊರೆಯಾಗುತ್ತಿದೆ. ನಿದ್ರೆ ಮಾಡುತ್ತಿರುವ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಬೆಲೆ ಏರಿಕೆಯನ್ನು ಮುಖ್ಯಮಂತ್ರಿಗಳು ವಾಪಸ್ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಪಟ್ಟಣ ಬಿಜೆಪಿ ಅಧ್ಯಕ್ಷ ಸಿದ್ದರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಮಾಜಿ ಜಿಪಂ ಸದಸ್ಯ ಚಿಕ್ಕರಂಗನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಂ.ಸಿ. ಬಸವಣ್ಣ, ಮಾಜಿ ತಾಪಂ ಸದಸ್ಯ ಬದನವಾಳು ರಾಮು, ಯುವ ಮೋರ್ಚಾ ಅಧ್ಯಕ್ಷ ಗೋವರ್ಧನ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad